ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವ ಹಿನ್ನೆೆಲೆಯಲ್ಲಿ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಜು.3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.
ನಿಷೇಧಾಜ್ಞೆ ಜಾರಿಯಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿಗಳು, ಈಟಿಗಳು, ಮಾರಕಾಸ್ತ್ರಗಳನ್ನು ಒಯ್ಯುವುದಾಗಲಿ ಅಥವಾ ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿಗಳ ಅಥವಾ ಅವರ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಹಾಡುವುದು, ಸಂಗೀತ ನುಡಿಸುವುದು, ಸಂಕೇತಗಳು/ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನ ನಿಷೇಧಿಸಲಾಗಿದೆ.
ಇದನ್ನೂ ಓದಿ :ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ಮೂರು ಈಡೇರಿದೆ: ದಿನೇಶ್ ಗುಂಡೂರಾವ್