ಬೆಂಗಳೂರು: ಮೆಜೆಸ್ಟಿಕ್ ಸಮೀಪದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿದಂತೆ ಕಟ್ಟಡ ಮಾಲೀಕರ ವಿರುದ್ಧ ಉಪ್ಪಾರಪೇಟೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಮೂರಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ಮುಂಜಾಗೃತಾ ಕ್ರಮವಾಗಿ ಕಟ್ಟಡದ ನಾಲ್ಕು ಕಡೆಗಳಲ್ಲಿಯೂ ತಾತ್ಕಾಲಿಕ ಗೋಡೆ ನಿರ್ಮಿಸುವಂತೆ ಸೂಚಿಸಿದ್ದರೂ ಮೂರು ಕಡೆ ಮಾತ್ರ ಗೋಡೆ ನಿರ್ಮಾಣವಾಗಿತ್ತು. ಸದ್ಯ ಘಟನೆ ಸಂಬಂಧ ಕಟ್ಟಡ ಮಾಲಿಕ ದೂರು ನೀಡಿದ್ದು, ಉಪ್ಪಾರಪೇಟೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಳೆದ ಮಂಗಳವಾರ ರಾತ್ರಿ ಕಪಾಲಿ ಚಿತ್ರಮಂದಿರ ಹಿಂದೆ ಕಟ್ಟಡ ಕಾಮಗಾರಿ ನಡೆಯುವಾಗ ಪಕ್ಕದಲ್ಲಿರುವ ಮೂರು ಅಂತಸ್ತಿನ ಕಟ್ಟಡ ಧರೆಗುರುಳಿತ್ತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿರಲಿಲ್ಲ. ಈ ವೇಳೆ, ಬಿಬಿಎಂಪಿ ಮೇಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ, ನಿರ್ಮಾಣ ಹಂತದ ಕಾಮಗಾರಿ ನಡೆಸುತ್ತಿದ್ದ ಕಟ್ಟಡ ಮಾಲೀಕರು, ಕುಸಿದುಬಿದ್ದ ಕಟ್ಟಡದ ಮಾಲೀಕರಿಗೆ ಪರಿಹಾರ ಒದಗಿಸಬೇಕು ಎಂದು ತಾಕೀತು ಮಾಡಿದ್ದರು.