ಬೆಂಗಳೂರು:ನಗರದ ವಿಲ್ಸನ್ ಗಾರ್ಡನ್ ಬಳಿಯ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿ ಇದ್ದವರೆಲ್ಲ ಹೊರಗೆ ಓಡಿ ಬಂದು ಬಚಾವ್ ಆಗಿದ್ದಾರೆ.
ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಕಳೆದ ಎರಡು ವರ್ಷದ ಹಿಂದೆ ಕಟ್ಟಡವು ಸ್ವಲ್ಪ ವಾಲಿತ್ತು. ಇಂದು ಬೆಳಗ್ಗೆ ಕಟ್ಟಡವು ಈ ಹಿಂದಿಗಿಂತಲೂ ಹೆಚ್ಚು ಬಾಗಿದ್ದು, ಅವಘಡದ ಮುನ್ಸೂಚನೆ ಅರಿತು ಮನೆಯಲ್ಲಿ ಇದ್ದವರೆಲ್ಲಾ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.