ಬೆಂಗಳೂರು : ಕಟ್ಟಡ ಕುಸಿದು ಬಿದ್ದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೂಡಿ ಸಮೀಪದ ಗ್ರಾಫೈಟ್ ಇಂಡಿಯಾ ಬಳಿ ನಡೆದಿದೆ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮೂವರು ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಜೈನುದ್ದೀನ್, ಅರ್ಮಾನ್ ಮೃತ ದುರ್ದೈವಿಗಳಾಗಿದ್ದು, ಬಿಎಲ್ ಆರ್ ಕಂಪನಿಗೆ ಸೇರಿದ ಕಟ್ಟಡ ತೆರವು ಮಾಡುವಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ಮಳೆ ಬಂದ ಹಿನ್ನೆಲೆ ಕಟ್ಟಡದ ಕೆಳ ಕೊಠಡಿಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದಿದೆ ಎಂದು ತಿಳಿದುಬಂದಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಜಿಂಕೆ ಮಾಂಸ ಸಾಗಣೆ: ಮೈಸೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ