ಬೆಂಗಳೂರು : ಅಪರಿಚಿತ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸಂದ್ರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷದ ಮಹಿಳೆಯ ಶವ ಎಂದು ಅಂದಾಜಿಸಲಾಗಿದೆ. ಮಹಿಳೆಯ ಮೃತದೇಹ ಗುರುತು ಸಿಗದಿರುವ ರೀತಿಯಲ್ಲಿದೆ.
ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ - ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ರಾಮಸಂದ್ರದಲ್ಲಿ ಪತ್ತೆ
ಅಪರಿಚಿತ ಮಹಿಳೆಯ ಸುಟ್ಟ ಮೃತದೇಹ ಬೆಂಗಳೂರಿನ ರಾಮಸಂದ್ರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.

ನಿರ್ಜನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ಮಹಿಳೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಪರಿಚಿತ ಮಹಿಳೆಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿರುವ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಓದಿ :ಅಯೋಧ್ಯೆಯ ದೇವಾಲಯದಲ್ಲಿ ಮಲಗಿದ್ದವನ ಕತ್ತು ಸೀಳಿ ಕೊಂದ ಕಿರಾತಕರು