ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಶಿಫ್ಟ್ ಮಾಡುವಾಗ ಶೆಟಲ್ ಬಸ್ ಟಿ2 ಪಿಲ್ಲರ್ಗೆ ಡಿಕ್ಕಿ ಹೊಡೆಯಿತು. ಬಸ್ನಲ್ಲಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮುಂಜಾನೆ 5.15ಕ್ಕೆ ಅವಘಡ ಸಂಭವಿಸಿದೆ. ಘಟನೆ ವೇಳೆ ಬಸ್ನಲ್ಲಿ ಒಟ್ಟು 17 ಮಂದಿ ಪ್ರಯಾಣಿಕರು (15 ಪ್ಯಾಕ್ಸ್ ಮತ್ತು 2 ಸಿಬ್ಬಂದಿ) ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ತಕ್ಷಣ ವಿಮಾನ ನಿಲ್ದಾಣದಲ್ಲಿರುವ ಆಸ್ಟರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಐದಾರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL)ನ ಅಧಿಕೃತ ಹೇಳಿಕೆಯ ಪ್ರಕಾರ, "ಇಂದು ಮುಂಜಾನೆ 5.15ಕ್ಕೆ ದೆಹಲಿಯಿಂದ ಏರ್ಏಷ್ಯಾ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಕರೆದೊಯ್ಯುವಾಗ ಶೆಟಲ್ ಬಸ್ T2 ಆಗಮನ ನಿರ್ಗಮನ ರಸ್ತೆಯ ಬಳಿ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಒಟ್ಟು 15 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ವಿಮಾನ ನಿಲ್ದಾಣದ ಸಿಬ್ಬಂದಿ ಇದ್ದರು. ಗಾಯಾಳುಗಳನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದೆ.