ಬೆಂಗಳೂರು:ಬೈಕ್ಗೆ ಬಸ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೈಕ್ಗೆ ತಮಿಳುನಾಡು ಬಸ್ ಡಿಕ್ಕಿ... ಯುವಕ ಸ್ಥಳದಲ್ಲೇ ಸಾವು - ಮೈಸೂರು ರಸ್ತೆ
ತಮಿಳುನಾಡು ಸಾರಿಗೆ ಬಸ್ಸೊಂದು ಬೈಕಿಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಯುವಕನ ದೇಹವನ್ನು ಸುಮಾರು ದೂರದ ವರೆಗೆ ಎಳೆದುಕೊಂಡು ಹೋಗಿದ್ದು, ಯುವಕ ಸಾವನ್ನಪ್ಪಿದ್ದಾನೆ.
ಕುಮಾರಸ್ವಾಮಿ ಲೇಔಟ್ ನಿವಾಸಿ ಜಗದೀಶ್ ಮೃತ ಸವಾರ. ನ್ಯಾಷನಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಜಗದೀಶ್, ಹೆಲ್ಮೆಟ್ ಧರಿಸಿಯೇ ಪ್ರಯಾಣ ಮಾಡುತ್ತಿದ್ದ. ಈ ವೇಳೆ ತಮಿಳುನಾಡು ಸಾರಿಗೆ ಬಸ್ಸೊಂದು ಬೈಕಿಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಯುವಕನ ದೇಹ ಸುಮಾರು ದೂರದ ವರೆಗೆ ಎಳೆದುಕೊಂಡು ಹೋಗಿದೆ.
ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ದೇಹವನ್ನು ಸ್ಥಳೀಯರ ನೆರವಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಸ್ಥಳದಲ್ಲೇ ಯುವಕ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ಬಸ್ ಚಾಲಕ ಅಬ್ದುಲ್ ಪಾಶಾನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.