ಬೆಂಗಳೂರು:ಐರಾವತ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ್ದು, ಘಟನೆಯಲ್ಲಿ ಓರ್ವ ಕೆಎಸ್ಆರ್ಟಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಿಂಗಪ್ಪ (44) ಮೃತ ಆನೇಕಲ್ ಬಸ್ ಡಿಪೋ ಚಾಲಕ ಎಂದು ಗುರುತಿಸಲಾಗಿದೆ. ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಘಟನೆ ನಡೆದಿದೆ. ದುರ್ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.