ಆನೇಕಲ್: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ವೊಂದಕ್ಕೆ ಖಾಸಗಿ ಬಸ್ ಡಿಕ್ಕಿಯೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು-ಅತ್ತಿಬೆಲೆ ಹೆದ್ದಾರಿ ಸಮೀಪದ ಗೆಸ್ಟ್ ಲೈನ್ ಬಳಿ ಈ ಅಪಘಾತ ಸಂಭವಿಸಿದೆ.
ಅತ್ತಿಬೆಲೆ ಸಮೀಪ ಬೈಕ್ಗೆ ಬಸ್ ಡಿಕ್ಕಿ: ಮೂವರ ದುರ್ಮರಣ - recently anekal updates
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ವೊಂದಕ್ಕೆ ಖಾಸಗಿ ಬಸ್ ಡಿಕ್ಕಿಯೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು-ಅತ್ತಿಬೆಲೆ ಹೆದ್ದಾರಿ ಸಮೀಪದ ಗೆಸ್ಟ್ ಲೈನ್ ಬಳಿ ಈ ಅಪಘಾತ ಸಂಭವಿಸಿದೆ.
ಬೈಕ್ನಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ ಖಾಸಗಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಮೃತರನ್ನು ಅಸ್ಸಾಂ ಮೂಲದ ಜಯಪ್ರಕಾಶ್, ಶಂಕರ, ಅಜಯ್ ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಇವರು ಕಾರ್ಮಿಕರಾಗಿದ್ದರು.
ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ತೆರಳುತ್ತಿದ್ದಾಗ ಈ ದುರಂತ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನು ಖಾಸಗಿ ಬಸ್ ಚಾಲಕನನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.