ಬೆಂಗಳೂರು:ಖಾಸಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಭೀಕರ ಘಟನೆ ಯಶವಂತಪುರದಲ್ಲಿರುವ ಗೋವರ್ಧನ ಚಿತ್ರಮಂದಿರದ ಮುಂಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿನುತಾ (32) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ವಿನುತಾ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮಹಿಳೆಯ ತಲೆ ಮೇಲೆ ಹರಿದ ಬಸ್:ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿನುತಾ ಕೆಳಕ್ಕೆ ಬಿದ್ದಿದ್ದರು. ಆಗ ವಿನುತಾ ತಲೆಯ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸ್ ಬಿಟ್ಟು ಚಾಲಕ ಪರಾರಿ:ಮೃತ ವಿನುತಾ ಸಂಜಯ ನಗರದ ನಿವಾಸಿಯಾಗಿದ್ದು, ಕಾಮಾಕ್ಷಿಪಾಳ್ಯದ ಕಚೇರಿಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಪತಿ ರಾಜಶೇಖರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಇವರಿಗೆ 11 ವರ್ಷದ ಮಗನಿದ್ದಾನೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
(ಇದನ್ನೂ ಓದಿ: ಬೆನ್ನಿಗೆ ಈಟಿ ಚುಚ್ಚಿಕೊಂಡು ನೇತಾಡುವಾಗ ದಿಢೀರ್ ಕುಸಿದು ಬಿದ್ದ ಕ್ರೇನ್! ನಾಲ್ವರು ಭಕ್ತರ ದಾರುಣ ಸಾವು )