ಕರ್ನಾಟಕ

karnataka

ETV Bharat / state

ಉಪಚುನಾವಣೆ ಘೋಷಣೆ: ಜೆಡಿಎಸ್​ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ! - by-election -2020

ಶಿರಾ ಹಾಗೂ ರಾಜರಾಜೇಶ್ವರಿನಗರ ಈ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಈ ನಿಟ್ಟಿನಲ್ಲಿ ಸಭೆ ಮೇಲೆ ಸಭೆ ನಡೆಸುತ್ತಿರುವ ಜೆಡಿಎಸ್​ ವರಿಷ್ಠರ ನಡೆ ಕುತೂಹಲ ಮೂಡಿಸಿದೆ.

By-election announcement; JDS leaders meeting
ಜೆಡಿಎಸ್​ ನಾಯಕರ ಸಭೆ

By

Published : Sep 29, 2020, 6:54 PM IST

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್​ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಶಿರಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ತಮ್ಮ ಪಕ್ಷದ ಹಿಡಿತದಲ್ಲಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜೆಡಿಎಸ್​ಗೆ ಎದುರಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಶಿರಾ ಕ್ಷೇತ್ರದ ಜೆಡಿಎಸ್ ಮುಖಂಡರ ಜೊತೆ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರಾದೇಶಿಕ ಪಕ್ಷದ ಶಕ್ತಿ ಉಳಿಸಿಕೊಳ್ಳುವ ಜವಾಬ್ದಾರಿ ನಿಮ್ಮ (ಕಾರ್ಯಕರ್ತರ) ಮೇಲಿದೆ ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ಕುಮಾರಸ್ವಾಮಿ ತಿಳಿಸಿದ್ದು, ಈಗಾಗಲೇ ಆಕಾಂಕ್ಷಿಗಳ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಅದೇ ರೀತಿ, ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆಗೂ ಅಭ್ಯರ್ಥಿಯನ್ನು ಹುಡುಕುವ ಕೆಲಸ ವರಿಷ್ಠರು ಆರಂಭಿಸಿದ್ದಾರೆ. ಈ ಎರಡೂ ಕ್ಷೇತ್ರಗಳು ಜೆಡಿಎಸ್​ಗೆ ಮಹತ್ವದ್ದಾಗಿದ್ದು, ಜೆಡಿಎಸ್ ವರಿಷ್ಠರ ನಡೆ ಕುತೂಹಲ ಮೂಡಿಸಿದೆ.

ABOUT THE AUTHOR

...view details