ಬೆಂಗಳೂರು:ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ವಿಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದ್ದು, ಕೆಲ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಲಾಗಿದೆ.
ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಚರ್ಚೆ ನಡೆಸಿದರು. ಹೊಸಕೋಟೆ, ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ. ಕೈ ಹಿರಿಯ ನಾಯಕರು ಈ ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಿದ್ದಾರೆ. ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂಬ ಬಗ್ಗೆ ಚರ್ಚೆಯಾಗಿದೆ.
ಹೊಸಕೋಟೆ, ಕೆ.ಆರ್. ಪುರಂ, ಯಶವಂತಪುರದ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಲಾಗಿದೆ. ಪಟ್ಟಿಯನ್ನು ದೆಹಲಿಗೆ ಕಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.
- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು:
- ಹೊಸಕೋಟೆ - ಭೈರತಿ ಸುರೇಶ್ ಪತ್ನಿ ಪದ್ಮಾವತಿ
- ಕೆ.ಆರ್.ಪುರ - ಎಂಎಲ್ ಸಿ ನಾರಾಯಣಸ್ವಾಮಿ
- ಶಿವಾಜಿನಗರ - ರಿಜ್ವಾನ್ ಅರ್ಷದ್/ಸಲೀಂ ಅಹಮದ್/ಎಸ್.ಎ. ಹುಸೇನ್
- ಮಹಾಲಕ್ಷ್ಮಿ ಲೇಔಟ್ - ಪಾಲಿಕೆ ಸದಸ್ಯ ಶಿವರಾಜ್/ಮಂಜುನಾಥ್ ಗೌಡ
- ಯಶವಂತಪುರ - ಜೆಡಿಎಸ್ ನ ಜವರೇಗೌಡ/ ಎಂ. ರಾಜಕುಮಾರ್/ಸದಾನಂದ
- ಚಿಕ್ಕಬಳ್ಳಾಪುರ - ಜಿ.ಹೆಚ್.ನಾಗರಾಜ್/ ಆಂಜಿನಪ್ಪ/ ಯಲವಳ್ಳಿ ರಮೇಶ್