ಬೆಂಗಳೂರು:ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕೈನ ಹಿರಿಯ ನಾಯಕರ ಜತೆ ಸಭೆ ನಡೆಸಿದ್ದಾರೆ.
15 ಕ್ಷೇತ್ರಗಳಲ್ಲಿ ಉಪಚುನಾವಣೆ ವಿಚಾರವಾಗಿ ಚರ್ಚಿಸಲು ಸಭೆ ನಡೆಸಲಾಗುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೃಷ್ಣ ಬೈರೇಗೌಡ, ಕೆ ಜೆ ಜಾರ್ಜ್ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.
ಸಭೆಗೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಕೈ ನಾಯಕರು.. ಸದ್ಯ ಹೊಸಕೋಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಕೈ ನಾಯಕರು ಸಮಲೋಚನೆ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿನ ಸ್ಥಿತಿಗತಿ, ಪಕ್ಷ ಸಂಘಟನೆ, ಸಂಭಾವ್ಯ ಅಭ್ಯರ್ಥಿಗಳ ವಿಚಾರವಾಗಿ ಸ್ಥಳೀಯ ಶಾಸಕರು, ವೀಕ್ಷಕರ ಜತೆ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ವೀರಪ್ಪ ಮೊಯ್ಲಿ, ಶಿವಶಂಕರ ರೆಡ್ಡಿ, ಭೈರತಿ ಸುರೇಶ್ ಸೇರಿದಂತೆ ಸ್ಥಳೀಯ ನಾಯಕರು ತಮ್ಮ ಅಭಿಪ್ರಾಯವನ್ನು ನೀಡಲಿದ್ದಾರೆ. ಭೈರತಿ ಸುರೇಶ್ ಪತ್ನಿ ಪದ್ಮಾವತಿ ಹೊಸಕೋಟೆಗೆ ಪ್ರಬಲಟಿಕೆಟ್ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ ಅತೃಪ್ತ ಶರತ್ ಬಚ್ಚೇಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿ, ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.