ಬೆಂಗಳೂರು:ಉಪಚುನಾವಣೆಯಲ್ಲಿ 15 ಸ್ಥಾನ ಗೆಲ್ಲಲು ರಾಜ್ಯ ಕಾಂಗ್ರೆಸ್ ನಾಯಕರು ಈಗಿನಿಂದಲೇ ತಯಾರಿ ನಡೆಸುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗ್ತಿದೆ.
ಈಗಾಗಲೇ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಪ್ರತಿಪಕ್ಷ ನಾಯಕ ಆಯ್ಕೆ ಸಂದರ್ಭ ಈ ಸಂಘರ್ಷ ಮುನ್ನಲೆಗೆ ಬಂದಿತ್ತು. ಉಪ ಚುನಾವಣೆ ಸಮೀಪಿಸುತ್ತಿದ್ದು, ಈ ಒಳತಿಕ್ಕಾಟದಿಂದ ಪಕ್ಷದ ಗೆಲುವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಮನಗಂಡಿರುವ ಸಿದ್ದರಾಮಯ್ಯ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.