ಬೆಂಗಳೂರು:ಹಾಲು ಕುಡಿದ ಮಕ್ಕಳೇ ಬದುಕಲ್ಲ, ಇನ್ನು ವಿಷ ಕುಡಿದವ್ರು ಬದುಕ್ತಾರಾ? ಈ ಹಿಂದೆ ಡಿ.ಕೆ.ಶಿವಕುಮಾರ್ ಅವರು ಹೇಳಿದ ಮಾತು ಅವರಿಗೆ ನೆನಪಿಸಬೇಕಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಮೈತ್ರಿ ನಾಯಕರ ಆರೋಪಕ್ಕೆ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು - undefined
ಪ್ರಸಕ್ತ ರಾಜಕೀಯ ವಿದ್ಯಮಾನಗಳಿಗೆ ಬಿಜೆಪಿ ಕಾರಣವಲ್ಲ ಎಂದು ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಸ್ಪಷ್ಟನೆ ನೀಡಿದ್ದಾರೆ.

ವಿಜಯೇಂದ್ರ
ಪ್ರಸಕ್ತ ರಾಜಕೀಯ ವಿದ್ಯಮಾನಗಳಿಗೆ ಬಿಜೆಪಿ ಕಾರಣವಲ್ಲ ಎಂದು ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ಪರೋಕ್ಷವಾಗಿ ಸ್ಪಷ್ಟನೆ ನೀಡಿದ್ದು, ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ ಇವು ಮೈತ್ರಿ ಸರ್ಕಾರದ ಕೂಸುಗಳು. ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ಗಳ ಪತನಕ್ಕೆ ಕಾರಣವಾಗಿದೆ ಎಂದು ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳ ನಾಯಕರ ಆರೋಪಕ್ಕೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.