ಬೆಂಗಳೂರು:ಅಗತ್ಯ ಮಾನದಂಡದ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ಹಾಕುವ ವ್ಯವಸ್ಥೆಯನ್ನು ತಕ್ಷಣವೇ ರೂಪಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯ ಪೀಠವು ಈ ನಿರ್ದೇಶನ ನೀಡಿದೆ.
ವಿಕಲಚೇತನರು ಅಥವಾ ಅವರ ಆರೈಕೆ ಮಾಡುವವರಿಂದ ಎಸ್ಎಂಎಸ್, ಇಮೇಲ್ ಅಥವಾ ವಾಟ್ಸಾಪ್ ಮೂಲಕ ಲಸಿಕೆಗಾಗಿ ವಿನಂತಿಗಳನ್ನು ಸ್ವೀಕರಿಸಲು ಜಿಲ್ಲಾ ಅಂಗವೈಕಲ್ಯ ಅಧಿಕಾರಿಗೆ ನಿರ್ದೇಶಿಸಲು ರಾಜ್ಯವು ಕ್ರಮ ಕೈಗೊಳ್ಳಬಹುದು. ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಸರತಿ ಸಾಲಿನಲ್ಲಿ ಕಾಯುವ ಅಗತ್ಯವಿಲ್ಲ ಎಂದು ಖಚಿತಪಡಿಸಿಕೊಳ್ಳುವ ಮೂಲಕ ಅರ್ಹ ವಿಕಲಾಂಗ ವ್ಯಕ್ತಿಗಳಿಗೆ ಲಸಿಕೆ ನೀಡಲು ಪರಿಣಾಮಕಾರಿ ವ್ಯವಸ್ಥೆಗಳನ್ನು ಮಾಡಲು ರಾಜ್ಯ ಮುಂದಾಗಬೇಕು ಎಂದು ಕೋರ್ಟ್ ಹೇಳಿದೆ.