ಕರ್ನಾಟಕ

karnataka

ETV Bharat / state

ಉಪಕದನ: ಪ್ರಚಾರದ ಅಖಾಡಕ್ಕೆ ಇಂದಿನಿಂದ ದೊಡ್ಡಗೌಡರು - ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆ

ರಾಜ್ಯ ವಿಧಾನಸಭೆಯ ಉಪಚುನಾವಣೆ ಕಣ ರಂಗೇರಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮತ್ತೆ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.

H.D. devegowda
ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು

By

Published : Nov 27, 2019, 9:50 AM IST

ಬೆಂಗಳೂರು: ಡಿಸೆಂಬರ್ 5 ರಂದು ನಡೆಯುವ ರಾಜ್ಯ ವಿಧಾನಸಭೆಯ ಉಪಚುನಾವಣೆ ಕಣ ರಂಗೇರಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮತ್ತೆ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.

ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯ ಶ್ರೀ ಸೋಮನಾಥ ಜ್ಯೋತಿರ್ಲಿಂಗ ದೇವಾಲಯಕ್ಕೆ ಕುಟುಂಬ ಸದಸ್ಯರೊಂದಿಗೆ ಸೋಮವಾರ ಭೇಟಿ ನೀಡಿ, ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿ ಬೆಂಗಳೂರಿಗೆ ವಾಪಾಸ್​​ ಆಗಿದ್ದಾರೆ. ಗೌಡರು ಇಂದಿನಿಂದ ಡಿಸೆಂಬರ್ 1 ರವರೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಲಿದ್ದಾರೆ.

ಪ್ರಚಾರದ ವಿವರಗಳು ಈ ಕೆಳಕಂಡಂತಿವೆ:

ಇಂದು ಮೈಸೂರು ಜಿಲ್ಲೆ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ.
ನ. 28- ಬೆಂಗಳೂರು ನಗರ ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರ.
ನ. 29- ಮಂಡ್ಯ ಜಿಲ್ಲೆ ಕೆ. ಆರ್. ಪೇಟೆ ವಿಧಾನಸಭಾ ಸಭಾ ಕ್ಷೇತ್ರ.
ನ. 30- ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ.
ಡಿ. 1- ಬೆಂಗಳೂರು ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಗೌಡರು ಪ್ರಚಾರ ನಡೆಸಲಿದ್ದಾರೆ.

ABOUT THE AUTHOR

...view details