ಕೆ.ಆರ್.ಪುರ/ಬೆಂಗಳೂರು:ಕೆ.ಆರ್.ಪುರ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟ 100 ಕುಟುಂಬಗಳಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.
ಕೆ.ಆರ್.ಪುರ ಸಾರ್ವಜನಿಕರ ಆಸ್ಪತ್ರೆಯಲ್ಲಿ ದಿ.ಎಂ.ರಾಮಚಂದ್ರ ಅವರ ಸ್ಮರಣಾರ್ಥ ತಾಲೂಕು ಆಸ್ಪತ್ರೆ ಆವರಣದಲ್ಲಿ ಶ್ರೀವಿಜಯ ಗಣಪತಿ ಡಯಾಲಿಸಿಸ್ ಕೇಂದ್ರ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು.
ಒಂದು ಕೋಟಿ ಇಪ್ಪತ್ತು ಲಕ್ಷ ರೂ. ವೆಚ್ಚದಲ್ಲಿ ದಿ.ರಾಮಚಂದ್ರ ಅವರ ಸ್ಮರಣಾರ್ಥ ಧರ್ಮಪತ್ನಿ ಸುಶೀಲ ದೇವಿ ಅವರು ರಾಜ್ಯದಲ್ಲಿಯೇ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರ ನಿರ್ಮಾಣ ಮಾಡಿಕೊಡುತ್ತಿರುವುದು ಸಂತಸದ ವಿಷಯ. ಸುಶೀಲ ದೇವಿ ಅವರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಜತೆಗೆ ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಸಮಾಜಕ್ಕೆ ಉಚಿತವಾಗಿ ಆ್ಯಂಬುಲೆನ್ಸ್ ನೀಡಿದ್ದಾರೆ ಎಂದರು.