ಕರ್ನಾಟಕ

karnataka

ETV Bharat / state

ಮೂರು ಮಹಾನಗರ ಪಾಲಿಕೆ ಫಲಿತಾಂಶ ತೃಪ್ತಿದಾಯಕವಾಗಿದೆ: ಮಾಜಿ ಸಿಎಂ ಬಿಎಸ್​ವೈ - BJP President Nalin Kumar Kateel

ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಉತ್ತಮ ಫಲಿತಾಂಶ ಬಂದಿದೆ. ಸಂಸದರು, ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಫಲಿತಾಂಶ ತೃಪ್ತಿದಾಯಕವಾಗಿದೆ ಎಂದು ಮಾಜಿ ಸಿಎಂ ಬಿಎಸ್​ವೈ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

c-m-b-s-yadiyurappa
ಮಾಜಿ ಸಿಎಂ ಬಿಎಸ್​ವೈ

By

Published : Sep 6, 2021, 3:21 PM IST

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದೆ. ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದೊಂದು ಐತಿಹಾಸಿಕ ಗೆಲುವು ಎಂದು ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ ಎಂದು ಅವರು ಹೇಳಿದ್ದಾರೆ.

ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಪರ ಆಡಳಿತ ನೀಡಲಿದೆ. ಈ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು, ಮತದಾರರು ಹಾಗೂ ಮುಖಂಡರಿಗೆ ಯಡಿಯೂರಪ್ಪ ಅಭಿನಂದನೆ ತಿಳಿಸಿದ್ದಾರೆ.

ಕಟೀಲ್ ಪ್ರತಿಕ್ರಿಯೆ

ರಾಜ್ಯದಲ್ಲಿ ಯಡಿಯೂರಪ್ಪ ಮಾರ್ಗದರ್ಶನ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಿದ್ದೆವು. ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟಿದ್ದೆವು. ಹೀಗಾಗಿ, ಜನತೆ ನಮ್ಮ ಕೈ ಹಿಡಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳು, ನಗರ ಪಾಲಿಕೆ ಮತ್ತು ನಗರ ಪಾಲಿಕೆ ಉಪಚುನಾವಣೆಗಳು ಆಗಿವೆ. ಈವರೆಗಿನ ಫಲಿತಾಂಶದ ಪ್ರಕಾರ, ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಪಕ್ಷವನ್ನು ಬೆಂಬಲಿಸಿದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ದೊಡ್ಡಬಳ್ಳಾಪುರ ಈವರೆಗೂ ನಮಗೆ ಇರಲಿಲ್ಲ. ಈ ಬಾರಿ ಬಿಜೆಪಿಗೆ ಬಂದಿದೆ. ಎಲ್ಲೆಡೆ ನಮ್ಮ ಚಿಂತನೆಗೆ ಜನ ಒಪ್ಪಿದ್ದಾರೆ. ದೇಶದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಪರ ಜನ ನಿಂತಿದ್ದಾರೆ. ಸ್ಪಷ್ಟ ಬಹುಮತ ಕೊಡುವ ಮೂಲಕ, ಬಿಜೆಪಿ‌ ಪರ ಅಲೆ ಇದೆ ಅನ್ನೋದನ್ನ ಸ್ಪಷ್ಟಪಡಿಸಿದ್ದಾರೆ ಎಂದರು.

ಕಾಂಗ್ರೆಸ್‌ನವರು ನಾನು ಸಿಎಂ ನಾನು ಸಿಎಂ ಅಂತ ಟವೆಲ್ ಹಾಕಿದ್ದಾರೆ. ಟವೆಲ್ ಸ್ಪಷ್ಟವಾಗಿ ತೆಗೆಯಿರಿ ಅಂತ ಜನ ತೋರಿಸಿದ್ದಾರೆ. ಸಿದ್ದರಾಮಯ್ಯ ಅವರು ಎಲ್ಲೂ ಪ್ರಚಾರಕ್ಕೆ ಹೋಗಲಿಲ್ಲ. ಈ ಮೂಲಕ ಡಿ.ಕೆ ಶಿವಕುಮಾರ್ ಅವರು ರಾಜ್ಯ ಅಧ್ಯಕ್ಷರಾಗಿ ವಿಫಲರಾಗಿದ್ದಾರೆ ಅನ್ನೋದನ್ನು ತೋರಿಸಿದ್ದಾರೆ. ಇದು ಸಿದ್ದರಾಮಯ್ಯ ಅವರ ತಂತ್ರವಾಗಿದೆ ಎಂದು ಕಾಂಗ್ರೆಸ್​ಗೆ ಟಾಂಗ್ ನೀಡಿದರು.

ಇದೇ ವೇಳೆ, ಯಡಿಯೂರಪ್ಪ ಸ್ಥಾನ ಬದಲಾವಣೆ ಆಡಿಯೋ ವೈರಲ್ ವಿಚಾರದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಅದು ಕೋರ್ಟ್‌ನಲ್ಲಿದೆ. ಆ ವಿಚಾರ ಬೇಡ ಎಂದು ಹೇಳಿದರು.

ಇದನ್ನೂ ಓದಿ:ಗಣೇಶ ಹಬ್ಬದ Special: ಹುಬ್ಬಳ್ಳಿಯಿಂದ ಬೆಂಗಳೂರಿಗೆ ತಡೆರಹಿತ ವೋಲ್ವೊ ಬಸ್ ಸೇವೆ

ABOUT THE AUTHOR

...view details