ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪಡೆಯ 4ನೇ ಬೆಟಾಲಿಯನ್‌ನಲ್ಲಿ ಸಶಸ್ತ್ರ ಪೇದೆಯಾಗಿದ್ದ ಮಂಜೇಶ್, ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸೋಂಕಿತ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಸಿಎಂ
ಕೋವಿಡ್ ಸೋಂಕಿನಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಕೆಎಸ್ಆರ್ಪಿಯ ಕಾನ್ಸ್ಟೆಬಲ್ ಶರಣಾಗಿದ್ದಾರೆ. ಮಂಜೇಶ್ ಸಾವಿಗೆ ಸಿ ಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸಿಎಂ ಬಿಎಸ್ ವೈ ಟ್ವೀಟ್
ರಾಜ್ಯದಲ್ಲಿ ಒಟ್ಟಾರೆ, ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರೆ ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೂ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜೊತೆಗಿರುತ್ತದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.