ಕರ್ನಾಟಕ

karnataka

ETV Bharat / state

ಪಕ್ಷ ನನಗೆ ಮಾತೃ ಸಮಾನ, ಪ್ರತಿಭಟನೆಗೆ ಯಾರೂ ಮುಂದಾಗಬೇಡಿ: ಅಭಿಮಾನಿಗಳು, ಬೆಂಬಲಿಗರಿಗೆ ಸಿಎಂ ಮನವಿ

ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ

By

Published : Jul 21, 2021, 8:53 PM IST

Updated : Jul 22, 2021, 6:35 AM IST

ಬೆಂಗಳೂರು: ಈವರೆಗೂ ನಾಯಕತ್ವ ಬದಲಾವಣೆ ವಿಷಯ ಬಂದಾಗ ಮೌನವಾಗಿದ್ದು ಇಲ್ಲವೇ ಪ್ರತಿಕ್ರಿಯೆ ನೀಡ ಇದೆಲ್ಲಾ ವದಂತಿ ಎನ್ನುತ್ತಿದ್ದ ಸಿಎಂ ಯಡಿಯೂರಪ್ಪ ಇದೇ ಮೊದಲ ಬಾರಿಗೆ ಈ ರೀತಿಯ ನಡವಳಿಕೆ ಬಿಟ್ಟು, ಪಕ್ಷದ ಗೌರವಕ್ಕೆ ಚ್ಯುತಿಬರುವಂತೆ ನಡೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಇದು ನಾಯಕತ್ವ ಬದಲಾವಣೆ ಖಚಿತ ಎನ್ನುವ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡುತ್ತಿದೆ.

ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಅಲ್ಲಲ್ಲಿ ಸಿಎಂ ಬೆಂಬಲಿಗರು, ಅಭಿಮಾನಿಗಳು ಪ್ರತಿಭಟನೆಯ ಹಾದಿ ತುಳಿಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಸಿಎಂ, ಯಾರೂ ಈ ರೀತಿ ನಡೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ

Last Updated : Jul 22, 2021, 6:35 AM IST

ABOUT THE AUTHOR

...view details