ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 60 ವೈದ್ಯರನ್ನು ಖಾಯಂಗೊಳಿಸಬೇಕು ಎಂದು ಗುತ್ತಿಗೆ ಆಧಾರದ ವೈದ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗೆ ಮನವಿ ಮಾಡಿದ್ದಾರೆ.
ಬಿಬಿಎಂಪಿ ಗುತ್ತಿಗೆ ಆಧಾರದ ವೈದ್ಯರಿಂದ ಹುದ್ದೆ ಖಾಯಂಮಾತಿಗೆ ಮನವಿ - Bengaluru
ಗುತ್ತಿಗೆ ಆಧಾರದ ವೈದ್ಯರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ವೈದ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗೆ ಮನವಿ ಮಾಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚು ಜನ ಆರೋಗ್ಯ ಪರೀಕ್ಷೆಗೆ ಒಳಪಡುತ್ತಿದ್ದು, ಇವರಿಗೆ ಸೇವೆ ನೀಡುವ ಉದ್ದೇಶದಿಂದ 2015ರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಮೂರರಿಂದ ಐದು ವರ್ಷಗಳ ಗುತ್ತಿಗೆ ಆಧಾರದ ಮೇಲೆ 60ಕ್ಕೂ ಹೆಚ್ಚು ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಈಗ ಕೊರೊನಾ ಸಂಕಷ್ಟದಲ್ಲಿ ಗುತ್ತಿಗೆ ವೈದ್ಯರು ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಆರೋಗ್ಯ ಇಲಾಖೆ ಈ ವರ್ಷ ಮೇ ತಿಂಗಳಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಗುತ್ತಿಗೆ ಆಧಾರ ಮೇಲೆ ಕೆಲಸ ಮಾಡ್ತಿರುವ 60ಕ್ಕೂ ಹೆಚ್ಚು ಜನ ವೈದ್ಯರನ್ನು ಖಾಯಂಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.
ಕಳೆದ ಐದು ವರ್ಷಗಳಿಂದ ಗುತ್ತಿಗೆ ವೈದ್ಯರು ಸೇವೆ ಸಲ್ಲಿಸುತ್ತಿದ್ದು, ಇತ್ತೀಚೆಗೆ 570ಕ್ಕೂ ಹೆಚ್ಚು ವೈದ್ಯರನ್ನು ಖಾಯಂಗೊಳಿಸಿದ ಮಾದರಿಯಲ್ಲೇ ನಮ್ಮನ್ನೂ ಖಾಯಂಗೊಳಿಸಬೇಕು ಎಂದು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಡಾ.ಮಹೇಶ್ವರಿ ಎಂಬುವರು ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಮನವಿ ಪತ್ರ ಬರೆದಿದ್ದಾರೆ.