ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಬಂಧ ಹೈಕಮಾಂಡ್ ಭೇಟಿಗೆ ಸಿಎಂ ಸಿದ್ಧತೆ ನಡೆಸಿರುವ ಬೆನ್ನೆಲ್ಲೇ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಉಮೇಶ್ ಕತ್ತಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಂದುವರೆದ ಸಂಪುಟ ವಿಸ್ತರಣೆ ಸರ್ಕಸ್... ಸಿಎಂ ಭೇಟಿಯಾದ ಉಮೇಶ್ ಕತ್ತಿ! - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಬಂಧ ಹೈಕಮಾಂಡ್ ಭೇಟಿಗೆ ಸಿಎಂ ಸಿದ್ಧತೆ ನಡೆಸಿರುವ ಬೆನ್ನೆಲ್ಲೇ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಉಮೇಶ್ ಕತ್ತಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಂದುವರೆದ ಸಂಪುಟ ವಿಸ್ತರಣೆ ಸರ್ಕಸ್...ಸಿಎಂ ಭೇಟಿಯಾದ ಉಮೇಶ್ ಕತ್ತಿ!
ಇಂದು ಮುಂಜಾನೆ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಆಗಮಿಸಿದ ಉಮೇಶ್ ಕತ್ತಿ, ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇರಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿರುವ ಕತ್ತಿ, ಸಂಪುಟ ರಚನೆಯಾದ ದಿನದಿಂದಲೇ ಸಚಿವ ಸ್ಥಾನ ಸಿಗದಿರವುದಕ್ಕೆ ಅಸಮಾಧಾನಗೊಂಡು ಪದೇ ಪದೆ ಸಿಎಂ ನಿವಾಸಕ್ಕೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.
ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡಿ ಬಂದಿರುವ ಕತ್ತಿ, ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.