ಕರ್ನಾಟಕ

karnataka

ETV Bharat / state

ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಮುಸ್ಲಿಂ ಬಾಂಧವರಿಗೆ ಆತಂಕ ಬೇಡ: ಭೈರತಿ ಬಸವರಾಜ್ - Citizenship (Amendment) Act

ಮುಸ್ಲಿಂ ಬಾಂಧವರು ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು, ಶಾಸಕ ಭೈರತಿ ಬಸವರಾಜ ತಿಳಿಸಿದರು.

CAA Awareness Campaign in kr puram
ಸಿಎಎ ಜನಜಾಗೃತಿ ಅಭಿಯಾನ

By

Published : Jan 7, 2020, 6:43 PM IST

ಬೆಂಗಳೂರು:ಮುಸ್ಲಿಂ ಬಾಂಧವರು ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಯಾವುದೇ ಆತಂಕ ಮತ್ತು ಗೊಂದಲ ಪಡುವ ಅಗತ್ಯವಿಲ್ಲ. ಪೌರತ್ವ ಕಾಯ್ದೆಯಿಂದ ನಮ್ಮ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಾಸಕ ಭೈರತಿ ಬಸವರಾಜ ತಿಳಿಸಿದರು.

ಕೆ.ಆರ್. ಪುರಂನ ಬಿಬಿಎಂಪಿ ಕಚೇರಿ ಎದುರು ಹಮ್ಮಿಕೊಂಡಿದ್ದ ಸಿಎಎ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿನಾಕಾರಣ ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡದೆ, ಈ ಕಾಯ್ದೆಯ ಕುರಿತು ಸಮಗ್ರ ಮಾಹಿತಿಯನ್ನು ಅರ್ಥ ಮಾಡಿಕೊಂಡಾಗ ಇದು ಮುಸ್ಲಿಂ ವಿರೋಧಿ ಅಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದರು. ಕೆ.ಆರ್. ಪುರಂ ಕ್ಷೇತ್ರದಲ್ಲಿ ಪ್ರತಿಯೊಂದು ಮನೆಗೂ ತೆರಳಿ ಈ ಕಾಯ್ದೆಯಿಂದ ಯಾರಿಗೂ ಅನ್ಯಾಯವಾಗುವುದಿಲ್ಲ ಎಂಬ ಸಂದೇಶವನ್ನು ಸಾರುತ್ತೇವೆ ಎಂದರು.

ಬಿಜೆಪಿಯಿಂದ ಸಿಎಎ ಜನಜಾಗೃತಿ ಅಭಿಯಾನ

ಬಳಿಕ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾತನಾಡಿ, ಅಲ್ಪಸಂಖ್ಯಾತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಯಾವುದೇ ಜನಾಂಗಕ್ಕೂ ಅನ್ಯಾಯವಾಗುವುದಿಲ್ಲ. ಭಾರತೀಯರಾದವರು ಹೆದರುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದರು.

ಭಾರತದ ಪ್ರಜೆಗಳಿಗೆ ರಕ್ಷಣೆ ನೀಡುವುದು ದೇಶದ ಪ್ರಧಾನಿಯವರ ಕೆಲಸ. ಈ ಕೆಲಸವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ಅವರ ಅಭಿವೃದ್ಧಿ ಸಹಿಸದವರು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಶ್ರೀಕಾಂತ್, ಎಸ್.ಜಿ. ನಾಗರಾಜ್, ಸುರೇಶ್ ಸೇರಿದಂತೆ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ABOUT THE AUTHOR

...view details