ಕರ್ನಾಟಕ

karnataka

ETV Bharat / state

ಅಂಬೇಡ್ಕರ್ ಬರೆದ ಸಂವಿಧಾನದಡಿಯೇ ಸಿಎಎ ಜಾರಿಗೆ ತರಲಾಗಿದೆ: ಯತ್ನಾಳ್ - ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಬರೆದ ಸಂವಿಧಾನದ ಪ್ರಕಾರವೇ ಪ್ರಧಾನಿ ನರೇಂದ್ರ ಮೋದಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೆ ತಂದಿದ್ದಾರೆ‌. ಆದರೆ ಅದರ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿ ಸಂವಿಧಾನಕ್ಕೆ ಅಪಚಾರ ಮಾಡಲಾಗುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದರು.

Yatnal
ಬಸನಗೌಡ ಪಾಟೀಲ್ ಯತ್ನಾಳ್

By

Published : Mar 6, 2020, 7:17 PM IST

ಬೆಂಗಳೂರು:ಡಾ.ಅಂಬೇಡ್ಕರ್ ಬರೆದ ಸಂವಿಧಾನದ ಪ್ರಕಾರವೇ ಪ್ರಧಾನಿ ನರೇಂದ್ರ ಮೋದಿ ಸಿಎಎ ಜಾರಿಗೆ ತಂದಿದ್ದಾರೆ‌. ಆದರೆ ಅದರ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿ ಸಂವಿಧಾನಕ್ಕೆ ಅಪಚಾರ ಮಾಡಲಾಗುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದರು.

ಬಸನಗೌಡ ಪಾಟೀಲ್ ಯತ್ನಾಳ್

ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ವಿಶೇಷ ಚರ್ಚೆ ವೇಳೆ ಮಾತನಾಡಿದ ಅವರು, ಸಿಎಎ ಭಾರತದ ಭವಿಷ್ಯವಾಗಿದೆ. ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರಬೇಕು.‌ ಎಲ್ಲರಿಗೂ ಒಂದೇ ಮದುವೆ, ಎರಡೇ‌ ಮಕ್ಕಳು ನೀತಿ ಬರಬೇಕು. ಇಲ್ಲವಾದರೆ ಭಾರತ ಭಾರತವಾಗಿ ಇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಇಂದು ಸಿಎಎ ಬಗ್ಗೆ ಆಗುತ್ತಿರುವ ಚರ್ಚೆಯ ಬಗ್ಗೆ ಅಂಬೇಡ್ಕರ್ ಮೊದಲೇ ನಿರೀಕ್ಷಿಸಿದ್ದರು‌. ಪಾಕಿಸ್ತಾನದಲ್ಲಿರುವ ದಲಿತರು ಯಾವುದಾದರೂ ರೀತಿಯಲ್ಲಿ ಭಾರತಕ್ಕೆ ಆಗಮಿಸುವಂತೆ ಸೂಚನೆ ನೀಡಿದ್ದರು. ಅಷ್ಟೇ ಅಲ್ಲದೆ ಹಿಂದೂಗಳು ತಮ್ಮನ್ನು ನಿಕೃಷ್ಟವಾಗಿ ನೋಡುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ ಹೈದ್ರಾಬಾದ್ ಮತ್ತಿತರ ಕಡೆಗಳಲ್ಲಿರುವ ಮುಸ್ಲಿಮರನ್ನು ದಲಿತರು ತಮ್ಮ ಸ್ನೇಹಿತರು ಎಂದು ಪರಿಗಣಿಸಿದರೆ ಆತ್ಮಘಾತಕವಾಗುತ್ತದೆ ಎಂದು ಸ್ವತಃ ಅಂಬೇಡ್ಕರ್ ಹೇಳಿದ್ದರು ಎಂದು ಯತ್ನಾಳ್ ವಿವರಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ತ್ರಿಕಾಲ ಜ್ಞಾನಿಗಳು. ಅವರಿಗೆ ಹಿಂದೆ ಏನಾಯ್ತು, ಈಗ ಏನಾಗುತ್ತಿದೆ, ಮುಂದೇನಾಗುತ್ತದೆ ಎಂಬುದು ತಿಳಿದಿತ್ತು. ಅದೇ ಅವರ ಸಂವಿಧಾನದಲ್ಲಿ ಉಲ್ಲೇಖವಾಗಿದೆ. ಹಾಗಾಗಿಯೇ ಸಂಘಪರಿವಾರದ ದತ್ತೋಪಂಥ ಹೆಗಡೆಯವರು ಡಾ.ಬಿ.ಆರ್.ಅಂಬೇಡ್ಕರ್ ಅವ​ರನ್ನು ಮಹನೀಯರು, ಪ್ರಾ ತ:ಸ್ಮರಣೀಯರು ಎಂದು ಉಲ್ಲೇಖಿಸಿದ್ದಾರೆ. ಈ ದೇಶದಲ್ಲಿ ಇಬ್ಬರು ಗಾಂಧಿಗಳಿಗೆ ಮಾತ್ರ ಪ್ರಾಮುಖ್ಯತೆ ಸಿಕ್ಕಿದೆ. ಒಬ್ಬರು ಮಹಾತ್ಮಾಗಾಂಧಿ ಇನ್ನೊಂದು ಈಗಿನ ಗಾಂಧಿ ಪರಿವಾರ. ಉಳಿದೆಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದೇ ಇಲ್ಲ. ಡಾ.ಅಂಬೇಡ್ಕ ಅವರು ಈ ದೇಶದ ಪ್ರಧಾನಿಯಾಗಬೇಕಿತ್ತು. ಅವರು ಬೌದ್ಧ ಧರ್ಮ ಸ್ವೀಕರಿಸಿದ್ರು, ಹಾಗಾಗಿಯೇ ಹಿಂದೂಗಳು ನೆಮ್ಮದಿಯಿಂದ ಇರುವಂತಾಯ್ತು ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರ ವೀರ ಸಾರ್ವಕರ್ ಬಗ್ಗೆ ಏನೇನೋ ಮಾತನಾಡುತ್ತಾರೆ. ಎರಡೆರಡು ಬಾರಿ ಕಾಲಾಪಾನಿ ಶಿಕ್ಷೆ ಅನುಭವಿಸಿದವರು. ಆದರೆ ಸಾವರ್ಕರ್ ಹಿಂದೂ ಧರ್ಮದ ಅಭಿಮಾನಿಗಳಾಗಿದ್ದಿದು, ಅಂಬೇಡ್ಕರ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಸಾವರ್ಕರ್ ಅವರ ಹಲವಾರು ವಿಚಾರಗಳನ್ನು ಅಂಬೇಡರ್ ಒಪ್ಪುತ್ತಿದ್ದರು ಎಂದು ಇದೇ ವೇಳೆ ತಿಳಿಸಿದರು.

ABOUT THE AUTHOR

...view details