ಬೆಂಗಳೂರು:ಯುವತಿ ಜೊತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 9ರ ಮಧ್ಯರಾತ್ರಿ 1ರಿಂದ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾಕೋಳು ಮೂಲದ ಮಂಜುನಾಥ್ ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ನಿನ್ನೆ ರಾತ್ರಿ ಯುವತಿ ಹಾಗೂ ಆಕೆಯ ಗೆಳೆಯರಿಬ್ಬರು ಪಾರ್ಟಿ ಮುಗಿಸಿ ಮನೆಗೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಾರೆ.