ಬೆಂಗಳೂರು: ಗೆಳತಿ ಮನೆಯಲ್ಲಿ ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಉಬರ್ ಕ್ಯಾಬ್ನಲ್ಲಿ ಬರುವಾಗ ಯುವತಿ ಜೊತೆ ಅಸಭ್ಯ ವರ್ತನೆ ತೋರಿ, ಚಾಲಕ ಅತ್ಯಾಚಾರ ನಡೆಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಜೀವನಭೀಮಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ ಹೆಚ್ಎಸ್ಆರ್ ಲೇಔಟ್ನಲ್ಲಿ ಗೆಳತಿ ಮನೆಯಲ್ಲಿ ಪಾರ್ಟಿ ಮುಗಿಸಿ ತಡರಾತ್ರಿ 2 ಗಂಟೆ ವೇಳೆ ಮುರುಗೇಶ್ ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಾರೆ. ಇದರಂತೆ ಚಾಲಕ ದೇವರಾಜ್ ಎಂಬಾತ ಯುವತಿಯನ್ನು ಕ್ಯಾಬ್ ಹತ್ತಿಸಿಕೊಂಡಿದ್ದಾನೆ. ಮನೆ ಬಳಿ ಬರುವಾಗ ಚಾಲಕ ಯುವತಿ ಮೇಲೆ ದೈಹಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.