ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇಂದು ಮೂರು ಗಂಟೆಗೆ ರಾಜಭವನದಲ್ಲಿ ನಡೆಯಲಿದ್ದು, ಹೊಸದಾಗಿ 7 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಮೂರು ಗಂಟೆಗೆ ಸಂಪುಟ ವಿಸ್ತರಣೆ : ಯಾರಾಗಲಿದ್ದಾರೆ ನೂತನ ಮಿನಿಸ್ಟರ್!? - ಬೆಂಗಳೂರು
ಇಂದು ಸಂಜೆ 3 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
ಇಂದು ಮೂರು ಗಂಟೆಗೆ ಸಂಪುಟ ವಿಸ್ತರಣೆ
ವಲಸಿಗರ ಕೋಟಾದಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಮುನಿರತ್ನ ಹಾಗೂ ಮೂಲ ಬಿಜೆಪಿಗರ ಕೋಟಾದಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಸಿ.ಪಿ.ಯೋಗೇಶ್ವರ್, ಮುರುಗೇಶ್ ನಿರಾಣಿ ಹೆಸರಿದ್ದು, ಹೆಚ್.ನಾಗೇಶ್, ಶಶಿಕಲಾ ಜೊಲ್ಲೆ, ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸಂಜೆ 3 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.