ಕರ್ನಾಟಕ

karnataka

ETV Bharat / state

ಡಿಸೆಂಬರ್‌ 22 ರ ಬಳಿಕ ಸಂಪುಟ ವಿಸ್ತರಣೆ: ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟನೆ - ಡಿ.22 ರ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದ ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಸಿಎಂ ಯಡಿಯೂರಪ್ಪ ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

cm-yadiyurappa
ಸಿ ಎಂ ಯಡಿಯೂರಪ್ಪ

By

Published : Dec 13, 2019, 5:57 PM IST

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಒಂದು ವಾರದ ನಂತರ ದೆಹಲಿಗೆ ತೆರಳುತ್ತೇನೆ. ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ರು.

ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇನೆ. ಸದ್ಯ ಅವರು ಜಾರ್ಖಂಡ್ ಚುನಾವಣೆಯ ಬ್ಯುಸಿಯಲ್ಲಿದ್ದಾರೆ. ನಂತರ ಭೇಟಿ ಮಾಡಿ, ಚರ್ಚೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾತು ಕೊಟ್ಟಂತೆ, ಎಲ್ಲರನ್ನೂ ಸಚಿವರನ್ನಾಗಿ ಮಾಡುತ್ತೇವೆ ಎಂದು ಇದೇ ವೇಳೆ ಸಿಎಂ ಪುನರುಚ್ಚರಿಸಿದರು.

ABOUT THE AUTHOR

...view details