ಕರ್ನಾಟಕ

karnataka

ETV Bharat / state

ಪರಿಷತ್ ಸರ್ಕಾರಿ ಮುಖ್ಯ ಸಚೇತಕ ನಾರಾಯಣ ಸ್ವಾಮಿಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರದ ಆದೇಶ

ವೈ ಎ ನಾರಾಯಣ ಸ್ವಾಮಿ ಅವರಿಗೆ ಸಂಪುಟ ಸಚಿವರ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪರಿಷತ್ ಸರ್ಕಾರಿ ಮುಖ್ಯ ಸಚೇತಕ ನಾರಾಯಣ ಸ್ವಾಮಿ
ಪರಿಷತ್ ಸರ್ಕಾರಿ ಮುಖ್ಯ ಸಚೇತಕ ನಾರಾಯಣ ಸ್ವಾಮಿ

By

Published : Dec 14, 2022, 7:21 PM IST

ಬೆಂಗಳೂರು: ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕರಾಗಿರುವ ವೈ ಎ ನಾರಾಯಣ ಸ್ವಾಮಿ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ಸಚಿವರ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಡಿಸೆಂಬರ್​ನಲ್ಲಿ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿತ್ತು. ಅಂದು ಸರ್ಕಾರದ ಮುಖ್ಯ ಸಚೇತಕರಾಗಿದ್ದ ಮಹಾಂತೇಶ ಕವಟಗಿಮಠ ಸೋತಿದ್ದರು. ಈ ಹಿನ್ನಲೆ ಸರ್ಕಾರದ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಇದನ್ನೂ ಓದಿ:ಬಿಎಸ್​ವೈ - ಬೊಮ್ಮಾಯಿ ನಡುವೆ ಅಸಮಾಧಾನದ ಗುಸು ಗುಸು: ಗುರು ಶಿಷ್ಯರ ನಡುವೆ ಮನಸ್ತಾಪವಾಗಿರುವುದು ನಿಜವೇ..?

ಮಾರ್ಚ್ 15 ರಂದು ಕಲಾಪ ನಡೆಯುವ ವೇಳೆ ಅಂದಿನ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೂಚನೆಯಂತೆ ಡಾ.ವೈ ಎ ನಾರಾಯಣಸ್ವಾಮಿ ಅವರನ್ನು ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿ ಪ್ರಕಟಣೆ ಹೊರಡಿಸಿದ್ದರು. ಇಂದು ನಾರಾಯಣಸ್ವಾಮಿ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ABOUT THE AUTHOR

...view details