ಬೆಂಗಳೂರು :ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರವಿ ಕುಶಾಲಪ್ಪ ಅವರು ಈಗಾಗಲೇ ಹಲವು ತಿಂಗಳುಗಳಿಂದ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಬಳಿಕ ಮತ್ತೊಬ್ಬ ಕೊಡಗಿನ ನಾಯಕನಿಗೆ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ಸಿಕ್ಕಂತಾಗಿದೆ.