ಕರ್ನಾಟಕ

karnataka

ETV Bharat / state

ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್.. 10 ಮಂದಿಗೆ ಅದೃಷ್ಟ, ಡಿಸಿಎಂ ಸವದಿ ಸ್ಥಾನಕ್ಕೆ ಸಂಚಕಾರ!? - Krnataka cabinet reformation news

ಎಂಟಿಬಿ ನಾಗರಾಜ್, ಆರ್.ಶಂಕರ್, ತಿಪ್ಪಾರೆಡ್ಡಿ, ಎ.ರಾಮದಾಸ್, ರಾಜೀವ್ ಕುಡಚಿ, ಅಂಗಾರ, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಹೆಚ್‌ ವಿಶ್ವನಾಥ್ ಹಾಗೂ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ..

ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್
ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್

By

Published : Jul 28, 2020, 6:29 PM IST

ಬೆಂಗಳೂರು: ಕೊರೊನಾ ಆರ್ಭಟದ ನಡುವೆಯೇ ಸಚಿವ ಸಂಪುಟ ಪುನಾರಚನೆಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಅಗಸ್ಟ್ ಮೊದಲ ವಾರದಲ್ಲಿ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ.

ಸಂಪುಟ ವಿಸ್ತರಣೆ ಬದಲು ಪುನಾರಚನೆಗೆ ದೆಹಲಿ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಹಾಗಾಗಿ, ಡಿಸಿಎಂ ಸೇರಿ ಆರು ಸಚಿವರಿಗೆ ಕೊಕ್ ನೀಡಿ, 10 ಮಂದಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ, ಪ್ರಭು ಚೌಹಾಣ್, ಶಶಿಕಲಾ ಜೊಲ್ಲೆ,ಸಿ ಸಿ ಪಾಟೀಲ್ ಸೇರಿ ಆರು ಸಚಿವರಿಗೆ ಕೊಕ್ ನೀಡಲು ಚಿಂತನೆ ನಡೆದಿದೆ ಎನ್ನಲಾಗಿದೆ. ಲಕ್ಷ್ಮಣ ಸವದಿ ಅವರು ದೆಹಲಿಗೆ ತೆರಳಿರುವುದು ಇದಕ್ಕೆ ಪುಷ್ಠಿ ನೀಡುವಂತಿದೆ. ಖಾಲಿ ಇರುವ 6 ಸ್ಥಾನ ಸೇರಿ 10 ಮಂದಿ ಹೊಸಬರಿಗೆ ಅವಕಾಶ ನೀಡಲಾಗ್ತಿದೆ. ಎರಡು ಸಚಿವ ಸ್ಥಾನ ಖಾಲಿ ಉಳಿಸಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾರಿಗೆ ಸ್ಥಾನ ? :ಎಂಟಿಬಿ ನಾಗರಾಜ್, ಆರ್.ಶಂಕರ್, ತಿಪ್ಪಾರೆಡ್ಡಿ, ಎ.ರಾಮದಾಸ್, ರಾಜೀವ್ ಕುಡಚಿ, ಅಂಗಾರ, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಹೆಚ್‌ ವಿಶ್ವನಾಥ್ ಹಾಗೂ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಖಾತೆಗಳೂ ಅದಲು ಬದಲು :ಕೆಲ ಹಿರಿಯ ಸಚಿವರ ಖಾತೆಗಳಲ್ಲೂ ಅದಲು-ಬದಲಾಗುವ ಸಾಧ್ಯತೆ ಇದೆಯಂತೆ. ಸಚಿವರಾದ ಆರ್.ಅಶೋಕ್, ಕೆ ಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್ ಖಾತೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ ಅಗಸ್ಟ್ 15 ಕ್ಕೂ ಮೊದಲೇ 10 ಶಾಸಕರಿಗೆ ಸಚಿವರಾಗುವ ಅದೃಷ್ಟದ ಬಾಗಿಲು ತೆರೆಯಲಿದೆ.

ABOUT THE AUTHOR

...view details