ಕರ್ನಾಟಕ

karnataka

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದು ಮಾಡಲು ಸಿಎಂ ಸೂಚನೆ

ಟ್ರ್ಯಾಕ್ಟರ್ ಮತ್ತು ಇತರೆ ವಾಹನ ಇದ್ದವರು ಹಾಗೂ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ? ತಕ್ಷಣ ಅದನ್ನು ಹಿಂತಿರುಗಿಸಿ ರದ್ದು ಮಾಡಿಸಿಕೊಳ್ಳಿ. ಇಲ್ಲದಿದ್ದರೆ ದಂಡ ತೆರಬೇಕಾದೀತು ಎಂದು ಸಿಎಂ ಬಿಎಸ್​ವೈ ಎಚ್ಚರಿಕೆ ನೀಡಿದ್ದಾರೆ.

By

Published : Jun 4, 2020, 7:16 PM IST

Published : Jun 4, 2020, 7:16 PM IST

Cancel ineligible and counterfeit rations: CM BSY  notice
ಅಧಿಕಾರಿಗಳಿಗೆ ಸೂಚನೆ ನೀಡಿದ ಬಿಎಸ್​ವೈ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರ್ಯಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದು ಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ತಲುಪಬೇಕು. ಜೊತೆಗೆ ಅನರ್ಹರು ಈ ಸೌಲಭ್ಯ ದುರುಪಯೋಗ ಮಾಡಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳಿಗೆ ಸೂಚನೆ ನೀಡಿದ ಬಿಎಸ್​ವೈ

ಕೋವಿಡ್ ಪ್ರಾರಂಭಕ್ಕೆ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲು ಅಭಿಯಾನ ನಡೆಸುವಂತೆ ಸೂಚಿಸಿದರು. ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಆಹಾರ ಮತ್ತು ನಾಗರಿಕರ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಸಿ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ. ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಧಿಕಾರಿಗಳಿಗೆ ಸೂಚನೆ ನೀಡಿದ ಬಿಎಸ್​ವೈ

ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪಡಿತರ ವಿತರಣೆ ಮಾಡಲಾಗಿದೆ. ಶೇ. 95ರಷ್ಟು ಪಡಿತರ ಚೀಟಿದಾರರು ಪಡಿತರ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆ ಅಡಿ 98,079 ಫಲಾನುಭವಿಗಳಿಗೆ 3 ಅನಿಲ ಸಿಲಿಂಡರ್​ಗಳನ್ನು ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗಿದೆ. ನಿಗಮದ 53 ಗೋದಾಮುಗಳು ಶಿಥಿಲಾವಸ್ಥೆಯಲ್ಲಿದ್ದು, 42 ಖಾಲಿ ನಿವೇಶನಗಳು ನಿಗಮದ ಒಡೆತನದಲ್ಲಿವೆ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿರುವ ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ 95 ಗೋದಾಮುಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ABOUT THE AUTHOR

...view details