ಕರ್ನಾಟಕ

karnataka

By

Published : Dec 17, 2019, 4:43 PM IST

ETV Bharat / state

ಪೊಲೀಸ್ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ತೆರವು

ಪೊಲೀಸ್ ಇಲಾಖೆಯ ಡಿಜಿ-ಐಜಿಪಿ‌ ಹಾಗೂ ಸರ್ಕಾರದ ಕಡೆಯಿಂದ ಅಫಿಡವಿಟ್‌ ಸಲ್ಲಿಕೆ ಮಾಡಿದ ಕಾರಣ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿದಂತೆ ಇಲಾಖೆಯ ಪ್ರಮುಖರಿಗೆ ನೀಡಿದ್ದ ನ್ಯಾಯಾಂಗ ನಿಂದನೆ ನೋಟಿಸ್​ನ್ನು ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಪೊಲೀಸ್ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ತೆರವು , Cancel of Judicial Abuse on police dept
ಪೊಲೀಸ್ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ತೆರವು

ಬೆಂಗಳೂರು:ಪೊಲೀಸ್ ಇಲಾಖೆಯ ಡಿಜಿ-ಐಜಿಪಿ‌ ಹಾಗೂ ಸರ್ಕಾರದ ಕಡೆಯಿಂದ ಅಫಿಡವಿಟ್‌ ಸಲ್ಲಿಕೆ ಮಾಡಿದ ಕಾರಣ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿದಂತೆ ಇಲಾಖೆಯ ಪ್ರಮುಖರಿಗೆ ನೀಡಿದ್ದ ನ್ಯಾಯಾಂಗ ನಿಂದನೆ ನೋಟಿಸ್​ನ್ನು ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಸಾರ್ವಜನಿಕರು ನೀಡುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸುವಾಗ ಪೊಲೀಸ್ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಬೇಕೆಂದು ಹೈಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿತ್ತು. ಆದರೆ, ಈ ಆದೇಶವನ್ನು ಪೊಲೀಸ್​ ಇಲಾಖೆ ಪಾಲನೆ ಮಾಡುತ್ತಿಲ್ಲ ಎಂದು ವಕೀಲ ಎಸ್.ಉಮಾಪತಿ ಪೀಠಕ್ಕೆ ತಿಳಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್​ ನೀಡಿತ್ತು.

ಅಲ್ಲದೆ, ಇಲಾಖೆಯನ್ನು ಪ್ರಶ್ನಿಸಿದ ನ್ಯಾಯಾಲಯ, ಕೋರ್ಟ್‌ನ ಆದೇಶವನ್ನು ಯಾಕೆ ಪಾಲಿಸಿಲ್ಲ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ, ಗೃಹ ಇಲಾಖೆಯ ಎಸಿಎಸ್ ರಜಿನೀಶ್ ಗೋಯಲ್‌ಗೆ ಕಳೆದ ವಿಚಾರಣೆ ವೇಳೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು. ಸದ್ಯ ಈ ವಿಚಾರವನ್ನ ಅಫಿಡವಿಟ್ ಮೂಲಕ ಸಲ್ಲಿಸಿದ ಕಾರಣ ನ್ಯಾಯಾಂಗ ನಿಂದನೆ ತೆರವು ಮಾಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ‌.

ABOUT THE AUTHOR

...view details