ಬೆಂಗಳೂರು :ನ್ಯೂ ಇಯರ್ ಸೆಲೆಬ್ರೇಷನ್ ಮುಗಿಸಿಕೊಂಡು ಹೋಗುವಾಗ ಕಾರು ಅಪಘಾತ ಆಗಿರುವ ಘಟನೆ ವೀರಣ್ಣಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ. ಈ ಬಾರಿಯ ಸೆಲೆಬ್ರೇಷನ್ ಬ್ರೇಕ್ ಹಾಕಲಾಗಿದೆ. ಆದರೂ ಕೆಲವರು ಮನೆಯಲ್ಲಿ, ಇನ್ನು ಕೆಲವರು ಪಬ್ ಬಾರ್, ರೆಸ್ಟೋರೆಂಟ್ ಗಳಲ್ಲಿ ಸೆಲೆಬ್ರೇಷನ್ ಮಾಡಿದ್ದಾರೆ.
ರಾತ್ರಿ ವೇಳೆ ಸೆಲೆಬ್ರೇಷನ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದ ಓರ್ವನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.