ರಮ್ಯಾ ವಿರುದ್ಧ ಅಶ್ಲೀಲ ಪೋಸ್ಟ್ ಆರೋಪ ಪ್ರಕರಣ: ಪತ್ರಕರ್ತ ನವೀನ್ ಸಾಗರ್‌ಗೆ ಜಾಮೀನು
ನಿರೀಕ್ಷಣಾ ಜಾಮೀನು ಕೋರಿ ನವೀನ್ ಸಾಗರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತನಿಖೆಗೆ ಸಹಕಾರ ನೀಡಬೇಕೆಂದು ಅರ್ಜಿದಾರರಿಗೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪತ್ರಕರ್ತ ನವೀನ್ ಸಾಗರ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿರೀಕ್ಷಣಾ ಜಾಮೀನು ಕೋರಿ ನವೀನ್ ಸಾಗರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವಿಚಾರಣೆ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರವಾಗಿ ವಕೀಲ ಅರುಣ್ ಶ್ಯಾಮ್ ವಾದ ಮಂಡನೆ ಮಾಡಿ, ಪತ್ರಕರ್ತ ನವೀನ್ ಸಾಗರ್ ಅವರು ರಮ್ಯಾ ಮೊದಲು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಅವರನ್ನ ಹಿಟ್ಲರ್ಗೆ ಹೋಲಿಸಿ ಪೋಸ್ಟ್ ಮಾಡಿದ್ರು. ಈ ಪೋಸ್ಟ್ಗೆ ನವೀನ್ ಸಾಗರ್ ರೀ ಪೋಸ್ಟ್ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ. ಹಾಗೇ ಅಭಿವ್ಯಕ್ತಿ ಸ್ವಾತಂತ್ರ್ಯದ ನೆಪದಲ್ಲಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿಲ್ಲ. ಸದ್ಯ ನವೀನ್ ಅವರು ಸೈಬರ್ ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂದು ವಾದ ಮಂಡನೆ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ತನಿಖೆಗೆ ಸಹಕಾರ ನೀಡಬೇಕೆಂದು ಅರ್ಜಿದಾರರಿಗೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ.
ಏನಿದು ಪ್ರಕರಣ :
ಈ ಕುರಿತು ಭವ್ಯ ಅನ್ನೋರು ಸಾಗರ್ ವಿರುದ್ಧ ಸೈಬರ್ ಕ್ರೈಂ ವಿಭಾಗದಲ್ಲಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಪೊಲೀಸರು ನವೀನ್ ಸಾಗರ್ ಮೇಲೆ ಕೇಸು ದಾಖಲಿಸಿಕೊಂಡು ಕಾನೂನು ಕ್ರಮ ಕೊಂಡಿದ್ದರು. ಇದೀಗ ಹೈಕೋರ್ಟ್ ನೀರಿಕ್ಷಣಾ ಜಾಮೀನು ನೀಡಿದೆ.