ಕರ್ನಾಟಕ

karnataka

ETV Bharat / state

ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಆರೋಪ: ಇಬ್ಬರು ಐಎಎಸ್ ಅಧಿಕಾರಿಗಳು ಸೇರಿ ಇತರರ ವಿರುದ್ಧದ ಪ್ರಕರಣ ರದ್ದು - CBI Special Court

ಆರೋಪಿಗಳ ವಿರುದ್ಧ ಯಾವುದೇ ಬಲವಾದ ಸಾಕ್ಷ್ಯಾಧಾರಗಳಿಲ್ಲ. ಪರಿಣಾಮ ಅವರನ್ನು ವಿಚಾರಣಾ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆ ಮಾಡಿದೆ. ಹಾಗಾಗಿ ಇದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್​ ಹೇಳಿದೆ.

ಹೈಕೋರ್ಟ್
ಹೈಕೋರ್ಟ್

By

Published : Oct 7, 2022, 11:35 AM IST

ಬೆಂಗಳೂರು:ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಆರೋಪದಲ್ಲಿ ಇಬ್ಬರು ನಿವೃತ್ತ ಐಎಎಸ್ ಅಧಿಕಾರಿಗಳು ಸೇರಿದಂತೆ ಗಣಿ ಕಂಪನಿ ಸಿಬ್ಬಂದಿ ವಿರುದ್ಧದ ಪ್ರಕರಣವನ್ನು ಸಿಬಿಐ ವಿಶೇಷ ನ್ಯಾಯಾಲಯ ರದ್ದುಗೊಳಿಸಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

2016ರ ಜನವರಿ 30ರಂದು ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ದೋಷಮುಕ್ತ ಗೊಳಿಸಿತ್ತು. ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರಿದ್ದ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಆರೋಪಿಗಳ ವಿರುದ್ಧ ಯಾವುದೇ ಬಲವಾದ ಸಾಕ್ಷ್ಯಾಧಾರಗಳಿಲ್ಲ. ಪರಿಣಾಮ ಅವರನ್ನು ವಿಚಾರಣಾ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಹೈಕೋರ್ಟ್ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂಬುದಾಗಿ ಆದೇಶದಲ್ಲಿ‌ ತಿಳಿಸಿದೆ.

ಆರೋಪಿಗಳಾದ ಬಳ್ಳಾರಿಯ ಡೆಕ್ಕನ್ ಮೈನಿಂಗ್ ಸಿಂಡಿಕೇಟ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿತೇಶ್ ಮಿಲಪ್‌ಚಂದ್ ಜೈನ್, ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್ ಜೈನ್, ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತ ಎನ್ ವಿಶ್ವನಾಥನ್, ನಿವೃತ್ತ ಉಪನಿರ್ದೇಶಕ ಎಸ್‌ಪಿ ರಾಜು ಸೇರಿ ಮತ್ತಿತರರನ್ನು ವಿಶೇಷ ನ್ಯಾಯಾಲಯ ದೋಷಮುಕ್ತ ಗೊಳಿಸಿತ್ತು.

ಇದನ್ನೂ ಓದಿ:ಒಳಚರಂಡಿ ನೀರನ್ನು ಮಳೆ ನೀರು ಕಾಲುವೆಗೆ ಹರಿಸಿದ್ದಕ್ಕೆ ಸಮಗ್ರ ತನಿಖೆಗೆ ಆದೇಶಿಸಿದ ಹೈಕೋರ್ಟ್​

ಆರೋಪಿತರು 1980 ರಿಂದ 2010ರ ಅವಧಿಯಲ್ಲಿ ಬೆಂಗಳೂರು, ಬಳ್ಳಾರಿ, ಹೊಸಪೇಟೆ ಮತ್ತು ಕರ್ನಾಟಕದ ಇತರ ಸ್ಥಳಗಳಲ್ಲಿ ವಂಚನೆ, ಕಬ್ಬಿಣದ ಅದಿರು ಕಳ್ಳತನ, ಕ್ರಿಮಿನಲ್ ಅತಿಕ್ರಮಣ, ಗಡಿ ಬದಲಾವಣೆ ಮತ್ತು ದುರುಪಯೋಗದ ಮೂಲಕ ಕ್ರಿಮಿನಲ್ ದುಷ್ಕೃತ್ಯದ ಅಪರಾಧಗಳನ್ನು ಎಸಗಲು ಕ್ರಿಮಿನಲ್ ಸಂಚು ರೂಪಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

ABOUT THE AUTHOR

...view details