ಯಲಹಂಕ: ಶಾಸಕ ಎಸ್.ಆರ್.ವಿಶ್ವನಾಥ್ಕೊಲೆಗೆ ಸಂಚು ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತು ಕುಳ್ಳ ದೇವರಾಜ್ ವಿರುದ್ಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಕೊಲೆಗೆ ಸಂಚು ನಡೆಸಿದ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ವಿಶ್ವನಾಥ್ ಅವರು ನಿನ್ನೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನ್ಯಾಯಾಲಯದ ಅನುಮತಿ ಪಡೆದ ಪೊಲೀಸರು ಕೊಲೆಗೆ ಸಂಚು ನಡೆದ ಆರೋಪದ ಮೇಲೆ ಗೋಪಾಲಕೃಷ್ಣ ಮತ್ತು ಕುಳ್ಳದೇವರಾಜ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ.