ಬೆಂಗಳೂರು: ಪ್ರತಿಭಟನೆ ವೇಳೆ ಮಹಿಳಾ ಗುಂಪಿನೊಂದಿಗೆ ಸಿಎಂ ಅಧಿಕೃತ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ವೀಣಾ ಕಾಶಪ್ಪನವರ್ ಹಾಗೂ ಮತ್ತಿತರರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ವೀಣಾ ಕಾಶಪ್ಪನವರ್ ವಿರುದ್ಧ ಪ್ರಕರಣ ದಾಖಲು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾರ್ಚ್ 8 ರಂದು ಮೌರ್ಯ ಸರ್ಕಲ್ ಬಳಿ ನಡೆದಿದ್ದ ಪ್ರತಿಭಟನೆ ನೇತೃತ್ವ ವಹಿಸಿದ್ದ ವೀಣಾ ಕಾಶಪ್ಪನವರ್ ಪ್ರತಿಭಟನಾಕಾರರ ಗುಂಪಿನೊಂದಿಗೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಬಳಿಕ ವೀಣಾ ಸೇರಿದಂತೆ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದ ಪೊಲೀಸರು ಬಳಿಕ ಬಿಡುಗಡೆಗೊಳಿದ್ದರು.ಸದ್ಯ ವೀಣಾ ಸೇರಿದಂತೆ ಮುತ್ತಿಗೆಗೆ ಯತ್ನಿಸಿದ್ದವರ ವಿರುದ್ಧ ಐಪಿಸಿ ಸೆಕ್ಷನ್ 143, 151,341 ಹಾಗೂ 149 ರಡಿ ಪ್ರಕರಣ ದಾಖಲಾಗಿದೆ.