ಬೆಂಗಳೂರು:ಇಂದು ವರಮಹಾಲಕ್ಷೀ ಪೂಜೆ ಹಾಗೂ ಬಕ್ರೀದ್ ಹಬ್ಬ ಇರುವ ಹಿನ್ನೆಲೆ ಜನ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಹಾಕದೇ ಮೈಮರೆತು ಮಾರುಕಟ್ಟೆಯಲ್ಲಿ ಹೂವು, ಖರೀದಿಸುತ್ತಿರುವ ದೃಶ್ಯ ಕಂಡು ಬಂತು. ಈ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಡಾ. ರೋಹಿಣಿ ಕಟೋಚ್ ಅವರ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ಹಲವರ ವಿರುದ್ಧ ಪ್ರಕರಣ ದಾಖಲಿಸಿದೆ.
ನಗರದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟಲು ಇತ್ತೀಚೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ನಿರ್ಗಮಿತ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜನರು ಕೊರೊನಾ ಸೋಂಕನ್ನು ಮರೆತು ನಿಯಮ ಉಲ್ಲಂಘಿಸಿದರೆ ಎನ್. ಡಿ. ಎಂ. ಎ ಕಾಯ್ದೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ವಿಭಾಗ ಪೊಲೀಸರು ನಿಯಮ ಉಲ್ಲಂಘನೆ ಮಾಡಿರುವ 100 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.