ಬೆಂಗಳೂರು:ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ನೋಟಿಸ್ ಜಾರಿಯಾಗಿದೆ.
ವಿಡಿಯೋ 'ಗೇಮ್': ತನಿಖೆಗೆ ಹಾಜರಾಗುವಂತೆ ಯುವತಿಗೆ 2ನೇ ನೋಟಿಸ್ ಜಾರಿ
ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಈಗಾಗಲೇ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ವಕೀಲ ಜಗದೀಶ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ.
ಸಿಡಿ ಪ್ರಕರಣ
ನಿನ್ನೆ ಕಬ್ಬನ್ ಪಾರ್ಕ್ ಪೊಲೀಸರು ವಕೀಲ ಜಗದೀಶ್ ಮೂಲಕ ಈ ನೋಟಿಸ್ ಜಾರಿ ಮಾಡಿದರು. ನೋಟಿಸ್‌ನಲ್ಲಿ ಘಟನೆ ಸಂಬಂಧ ಸ್ಥಳ ಮಹಜರು, ಮೆಡಿಕಲ್ ಟೆಸ್ಟ್ ಮತ್ತು ಸಂತ್ರಸ್ತೆಯ ಹೇಳಿಕೆ ಅತ್ಯಗತ್ಯ ಎಂದು ತಿಳಿಸಲಾಗಿದೆ.
ಹೀಗಾಗಿ ಪ್ರಕರಣದ ಕುರಿತು ಮುಂದಿನ ತನಿಖೆಗೆ ಸಂತ್ರಸ್ತೆ ಹಾಜರಾಗುವುದು ಅನಿವಾರ್ಯವಾಗಿದೆ.