ಬೆಂಗಳೂರು:ಕಾವೇರಿ ಕೂಗು ಯೋಜನೆ ಈಶ ಔಟ್ ರೀಚ್ ಸಂಸ್ಥೆ ಕೈಗೊಂಡಿರುವ ಕಾರ್ಯಕ್ರಮವಾಗಿದ್ದು, ಇದರಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಈಶ ಔಟ್ ರೀಚ್ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ.
ಓದಿ: ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿವಾದ ; ಸಹೋದರಿಯರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ!

ಕಾವೇರಿ ಕೂಗು ಯೋಜನೆಗೆ ಈಶ ಫೌಂಡೇಶನ್ ಸಾರ್ವಜನಿಕರಿಂದ ಅನಧಿಕೃತವಾಗಿ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು, ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ಆಗಿ ಪರಿವರ್ತಿಸಿಕೊಂಡಿದೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈಶ ಔಟ್ ರೀಚ್ ಸಂಸ್ಥೆಯ ಪರ ವಕೀಲರು ಯೋಜನೆಯಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾವೇರಿ ಕೂಗು ಯೋಜನೆ ಈಶ ಔಟ್ ರೀಚ್ ಕೈಗೊಂಡಿರುವ ಯೋಜನೆ. ನದಿ ತಪ್ಪಲಿನ ರೈತರ ಭೂಮಿಯಲ್ಲಿ ಸಸಿಗಳನ್ನು ನೆಡಲು ಸಂಸ್ಥೆ ಮುಂದಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ಸಂಬಂಧ ಈಶ ಔಟ್ ರೀಚ್ ತನ್ನ ವೆಬ್ ಸೈಟ್ ನಲ್ಲಿ ಕೂಡ ಸ್ಪಷ್ಟವಾಗಿ ತಿಳಿಸಿದೆ ಎಂದು ವಿವರಿಸಿದರು.
ಇನ್ನು ಇದೇ ವೇಳೆ, ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮನವಿ ಮಾಡಿ, ಸರ್ಕಾರದ ನಿಲುವನ್ನು ಲಿಖಿತವಾಗಿ ಸ್ಪಷ್ಟಪಡಿಸಲು ಒಂದಷ್ಟು ಕಾಲಾವಕಾಶ ನೀಡುವಂತೆ ಕೋರಿದರು. ಕೋರಿಕೆ ಪುರಸ್ಕರಿಸಿದ ಪೀಠ ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಿತು. ಕಾವೇರಿ ಕೂಗು ಯೋಜನೆಯಲ್ಲಿ ಸರ್ಕಾರದ ಪಾತ್ರವಿದೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.