ಬೆಂಗಳೂರು :ಡಿ ಕೆ ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ ಆರ್‌ಆರ್‌ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ. ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ ಸಿಬಿಐಗೆ ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದ್ಯಾಕೆ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್ ತಮ್ಮ ಟ್ವೀಟ್‌ನಲ್ಲಿ, ಡಿಕೆಶಿ ನ್ಯಾಯಾಂಗ ಹಾಗೂ ದೇವರ ಮೇಲೆ ನಂಬಿಕೆಯಿರುವ ಬಲಿಷ್ಠ ನಾಯಕ, ಪ್ರಸ್ತುತ ಚುನಾವಣಾ ಸಂದರ್ಭದಲ್ಲಿ ಸಿಬಿಐ ದಾಳಿಯಿಂದ ಅವರನ್ನು ಕಟ್ಟಿ ಹಾಕಲು ಮಾಡುತ್ತಿರುವ ಪ್ರಯತ್ನ ವಿಫಲವಾಗಲಿದ್ದು, ಎರಡೂ ಕ್ಷೇತ್ರಗಳಲ್ಲಿ ಮತದಾರರು ರಾಷ್ಟ್ರೀಯ ಬಿಜೆಪಿಗೆ ಪಾಠ ಕಲಿಸಲಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷ ಡಿಕೆಶಿ ಜೊತೆಗಿದೆ, ಅವರು ಧೃತಿಗೆಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ.
ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್ ಟ್ವೀಟ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಮಾಡಿದ್ದು, ಡಿ ಕೆ ಶಿವಕುಮಾರ್ ಅವರ ನಾಯಕತ್ವಕ್ಕೆ ಹೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂತಹ ನೀಚ ತಂತ್ರ ಮಾಡುತ್ತಿವೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ ನಿಮಗೆ ನೈತಿಕತೆಯಿದ್ದರೆ ಮೊದಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಹಗರಣಗಳನ್ನು ತನಿಖೆಗೆ ಒಳಪಡಿಸಲು ಆದೇಶ ನೀಡಿ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುವ ಕಾರ್ಯವನ್ನು ಐಟಿ, ಇಡಿ, ಸಿಬಿಐ ಸಂಸ್ಥೆಗಳ ಮೂಲಕ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಮಾತ್ರ ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ದಾಳಿ ನಡೆಸಲಾಗುತ್ತಿದೆ. ಡಿ ಕೆ ಶಿವಕುಮಾರ್ ಮನೆ ಮೇಲಿನ ದಾಳಿ ರಾಜಕೀಯ ಪ್ರೇರಿತ ಎಂದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್‌ನಲ್ಲಿ, ಹಿಂಬಾಗಿಲಿನಿಂದ ಅಧಿಕಾರ ಪಡೆದ ರಾಜ್ಯ ಬಿಜೆಪಿ ಸರ್ಕಾರ ಇಂದು ಎಲ್ಲಾ ಸ್ವಾಯತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಬೆಳ್ಳಂಬೆಳಗ್ಗೆ 15 ಕಡೆ ಡಿ ಕೆ ಶಿವಕುಮಾರ್ ಮತ್ತು ಸಂಸದ ಡಿ ಕೆ ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ನಾನು ತೀವ್ರವಾಗಿ ಖಂಡಿಸುತ್ತೇನೆ. ಇದರ ವಿರುಧ್ಧ ಕಾನೂನಾತ್ಮಕ ಹೋರಾಟ ನಡೆಯಲಿದೆ.
ಬಿಜೆಪಿಯ ಕ್ಷುಲ್ಲಕ ಮತ್ತು ದ್ವೇಷದ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಸಿಬಿಐ, ಜಾರಿ ನಿರ್ದೇಶನಾಲಯ, ಎನ್ಐಎ ನಂತಹ ಸಂಸ್ಥೆಗಳ ದುರ್ಬಳಕೆ ಅವ್ಯಾಹತವಾಗಿದೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ ಕೆ ಸುರೇಶ್ ಅವರ ಮನೆಗಳ ಮೇಲಿನ ಸಿಬಿಐ ದಾಳಿ ಇದಕ್ಕೆ ಜ್ವಲಂತ ಉದಾಹರಣೆಯಾಗಿದ್ದು, ರಾಷ್ಟ್ರೀಯ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ಅಧಿಕಾರದ ಹಪಾಹಪಿಗೆ ಹಿಡಿದ ಕೈಗನ್ನಡಿಯಾಗಿದೆ. ಇದು ನಾಚಿಕೆಗೇಡಿನ ವರ್ತನೆ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಟ್ವೀಟ್ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಟ್ವೀಟ್‌ನಲ್ಲಿ, ಮೊದಲ ನೋಟಕ್ಕೇ ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮೇಲಿನ ಸಿಬಿಐ ದಾಳಿ ರಾಜಕೀಯ ಷಡ್ಯಂತ್ರ ಎಂದು ಯಾರಿಗಾದ್ರೂ ತಿಳಿಯುತ್ತದೆ. ಹೈಕೋರ್ಟ್ ಅನುಮತಿ ಇಲ್ಲದೆ ದಾಳಿ ನಡೆಸಿರುವುದು ದುರುದ್ದೇಶಪೂರಿತವಲ್ಲದೆ ಇನ್ನೇನು? ಈ ಹೆದರಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ಮತ್ತು ಅದರ ಸದಸ್ಯರು ಬಗ್ಗುವುದಿಲ್ಲ ಎಂದಿದ್ದಾರೆ.