ಬೆಂಗಳೂರು:ನಕಲಿ ದಾಖಲೆಗಳನ್ನು ಸೃಷ್ಟಿಸಿ 12.48 ಕೋಟಿ ರೂ. ಸಾಲ ಪಡೆದು ವಂಚಿಸಿರುವ ಆರೋಪದಡಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಅವರ ಕುಟುಂಬಸದಸ್ಯರೂ ಸಹಿತ ಒಟ್ಟು 7 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್ಐಆರ್ ದಾಖಲಿಸಿಕೊಂಡಿದೆ.
ನಗರದ ಎಂ.ಜಿ.ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಡಿ.ಮೋದಿ ಸಲ್ಲಿಸಿರುವ ದೂರಿನನ್ವಯ ನಂಜಪ್ಪ ಶಿವಪ್ರಸಾದ್, ಪತ್ನಿ ಉಮಾ ಪ್ರಸಾದ್, ರಾಯಲ್ ಕಂಕಾರ್ಡ್ ಎಜುಕೇಷನ್ ಟ್ರಸ್ಟ್, ಟ್ರಸ್ಟ್‌ನ ಆಡಳಿತ ಮಂಡಳಿಯ ಸದಸ್ಯರಾದ ಎಲ್.ಆರ್.ಶಿವರಾಮೇಗೌಡ, ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್.ಎಸ್. ಭವ್ಯಾ ಗೌಡ, ಬ್ಯಾಂಕ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.