ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಶಿವಕುಮಾರ್ ಕುಟುಂಬಸ್ಥರ ಮೇಲೂ ಆರೋಪ ಹೊರಿಸಿ ತನಿಖೆ ನಡೆಸುತ್ತಿರುವ ಸಿಬಿಐ ಕ್ರಮ ಪ್ರಶ್ನಾರ್ಹವಾಗಿದೆ ಎಂದು ಶಿವಕುಮಾರ್ ಪರ ವಕೀಲರು ವಾದ ಮಂಡಿಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಮತ್ತು ಆ ಕುರಿತ ತನಿಖೆ ರದ್ದುಪಡಿಸುವಂತೆ ಕೋರಿ ಡಿ ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಪೀಠದ ಮುಂದೆ ಶಿವಕುಮಾರ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.
ಅಲ್ಲದೆ, ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಯಲ್ಲಿ ಅರ್ಜಿದಾರರ ಕುಟುಂಬಸ್ಥರ ಹೆಸರು ಉಲ್ಲೇಖಿಸಿಲ್ಲ. ಆದರೂ, ಕುಟುಂಬದ ಸದಸ್ಯರ ಮೇಲೂ ಆರೋಪ ಹೊರಿಸಲಾಗಿದೆ. ಕುಟುಂಬದ ಸದಸ್ಯರು ಗಳಿಸಿರುವ ಆದಾಯವನ್ನೂ ಶಿವಕುಮಾರ್ ಅವರ ವೈಯಕ್ತಿಕ ಆದಾಯವೆಂದು ತನಿಖಾಧಿಕಾರಿಗಳು ಪರಿಗಣಿಸಿದ್ದಾರೆ. ಆ ಮೂಲಕ ಅರ್ಜಿದಾರರು ನಿಗದಿಗಿಂತ ಹೆಚ್ಚಿನ ಆದಾಯ ಸಂಪಾದನೆ ಮಾಡಿದ್ದಾರೆ ಎಂಬುದಾಗಿ ಹೇಳುತ್ತಿದ್ದಾರೆ. ಕುಟುಂಬ ಸದಸ್ಯರ ಆದಾಯ ಪರಿಗಣಿಸಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ವಾದ ಮಂಡಿಸಿದರು.
ಇದನ್ನೂ ಓದಿ :ಶಾಸಕರಾಗಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್ಗೆ ಅರ್ಜಿ