ಬೆಂಗಳೂರು:ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವುದರಿಂದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿರಬಹುದು. ಸಿಎಂ ಯಡಿಯೂರಪ್ಪ ಅವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ ಪರೋಕ್ಷವಾಗಿ ಹೆಚ್ಡಿಕೆ ವಿರುದ್ಧ ಕುಟುಕಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ: ಕುಮಾರಸ್ವಾಮಿಗೆ ಆತಂಕ ಕಾಡ್ತಿದೆ ಅಂದ್ರು ಹೆಚ್. ವಿಶ್ವನಾಥ್ - ಸಿಬಿಐ ತನಿಖೆ
ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿರುವುದು ಕುಮಾರಸ್ವಾಮಿಗೆ ಆತಂಕ ತಂದಿರಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ ಹೇಳಿದ್ರು.
ಅನರ್ಹ ಶಾಸಕ ಹೆಚ್.ವಿಶ್ವನಾಥ್
ಧವಳಗಿರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ನಾಲ್ಕು ಭಾಗವಾಗಿದೆ. ಕೆಲವರು ಸ್ವಾಗತಿಸಿದರೆ, ಹಲವು ವಿರೋಧಿಸುತ್ತಿದ್ದಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಸಿದ್ದರಾಮಯ್ಯ ಸ್ವಾಗತಿಸಿರುವುದು ಒಳ್ಳೆಯದು ಎಂದು ಹೇಳಿದರು.
ನಾನು ಚುನಾವಣಾ ರಾಜಕಾರಣದಿಂದ ವಿರಾಮ ತೆಗೆದುಕೊಂಡಿದ್ದೇನೆ. ಆದರೆ, ರಾಜಕೀಯದಲ್ಲಿ ಸಕ್ರಿಯವಾಗಿ ಇರುತ್ತೇನೆ. ಜನರ ಕಷ್ಟ, ಸುಖದಲ್ಲಿ ಭಾಗಿಯಾಗಿರುತ್ತೇನೆ ಎಂದು ಹೆಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ರು.
Last Updated : Aug 18, 2019, 4:37 PM IST