ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ಸಮೀಪದ ದೊಡ್ಡಾಲಳ್ಳಿ ನಿವಾಸದ ಮೆಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಅಧಿಕಾರಿಗಳ ತಂಡವು ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿರುವ ಬಗ್ಗೆ ಡಿಕೆಶಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದಾಳಿ ವೇಳೆ ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿವರಣೆ ನೀಡಿದ್ದಾರೆ. ಸಿಬಿಐ ಅಧಿಕಾರಿಗಳ ದಾಳಿಗೆ ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರು ಸಾಥ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.