ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಡಿ ಕೆ ಸಹೋದರರಿಗೆ ಶಾಕ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐವರು ಸಿಬಿಐ ಅಧಿಕಾರಿಗಳ ತಂಡ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ ಡಿ ಕೆ ಬ್ರದರ್ಸ್ಗೆ ಸಿಬಿಐ ಶಾಕ್.. ಏಕಕಾಲಕ್ಕೆ 14 ಕಡೆಗಳಲ್ಲಿ ದಾಳಿ - ಡಿಕೆ ಸಹೋದರರ ಮನೆ ಮೇಲೆ ಸಿಬಿಐ ದಾಳಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ, ಸಂಸದ ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಸಂಸದ ಡಿ.ಕೆ. ಸುರೇಶ್
ಡಿ.ಕೆ. ಶಿವಕುಮಾರ್ ಸಹೋದರ ಸಂಸದ ಡಿ.ಕೆ. ಸುರೇಶ್ ನಿವಾಸದ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸದಾಶಿವ ನಗರದಲ್ಲಿರುವ ಸಂಸದ ಡಿ.ಕೆ. ಸುರೇಶ್ ಮನೆ ಸೇರಿದಂತೆ ಒಟ್ಟು 14 ಕಡೆಗಳಲ್ಲಿ ಸಿಬಿಐ ದಾಳಿ ನಡೆದಿದೆ.
ಏಕಕಾಲಕ್ಕೆ ಡಿ ಕೆ ಬ್ರದರ್ಸ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Last Updated : Oct 5, 2020, 11:29 AM IST