ಕರ್ನಾಟಕ

karnataka

ETV Bharat / state

ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಆದೇಶ

2016ರ ಜೂನ್​ನಲ್ಲಿ ನಡೆದಿದ್ದ ಧಾರವಾಡ-ಹುಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ..!

By

Published : Sep 6, 2019, 11:38 PM IST

Updated : Sep 9, 2019, 7:18 PM IST

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ

2016ರ ಜೂನ್​ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನನ್ನು ಕೊಲೆ‌ ಮಾಡಲಾಗಿತ್ತು.‌ ಈ ಕೊಲೆ ರಾಜಕೀಯವಾಗಿ ಭಾರಿ ಸದ್ದು ಮಾಡಿತ್ತು.‌ ಆ ವೇಳೆ ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಿತ್ತು. ಈ ಕೊಲೆ ಹಿಂದೆ ಕಾಂಗ್ರೆಸ್ ನ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಹೆಸರು ತಳಕು ಹಾಕಿಕೊಂಡಿತ್ತು.‌ ಈ ಸಂಬಂಧ ಬಿಜೆಪಿ, ವಿನಯ್ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಯನ್ನೂ ನಡೆಸಿತ್ತು. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಅಂದಿನ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಜೊತೆಗೆ ಪೊಲೀಸ್ ತನಿಖೆ ಪಕ್ಷಪಾತವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಯೋಗೇಶ್ ಗೌಡ ಅವರ ಸಹೋದರ ಹೈಕೋರ್ಟ್ ಮೊರೆ ಹೋಗಿದ್ದರು.

ಫೋನ್ ಟ್ಯಾಪಿಂಗ್, ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಬಿಜೆಪಿ ಸರ್ಕಾರ ಇದೀಗ ಯೋಗೀಶ್ ಗೌಡ ಕೊಲೆ ಪ್ರಕರಣವನ್ನೂ ಸಿಬಿಐ ತನಿಖೆಗೆ ನೀಡಿದೆ.

Last Updated : Sep 9, 2019, 7:18 PM IST

ABOUT THE AUTHOR

...view details