ಕರ್ನಾಟಕ

karnataka

ETV Bharat / state

ಸಿಸಿಬಿ ಪೊಲೀಸರ ದಾಳಿ: ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಅರೋಪಿ ಅಂದರ್​ - ಬೆಂಗಳೂರಿನಲ್ಲಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಸುದ್ದಿ

ಬೆಂಗಳೂರಿನಲ್ಲಿ ಕಾಳಸಂತೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಆಕ್ಸಿಜನ್​ ಸಿಲಿಂಡರ್​ ಮಾರುತ್ತಿದ್ದಾಗ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಓರ್ವನನ್ನ ಬಂಧಿಸಿದ್ದಾರೆ.

CCB arrested a man who was selling oxygen cylinder in Black market
ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಅರೋಪಿ ಬಂಧನ

By

Published : May 8, 2021, 9:24 AM IST

ಬೆಂಗಳೂರು:ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಓರ್ವ ಆರೋಪಿಯಯನ್ನು ಬಂಧಿಸಿದ್ದಾರೆ.

ಕೋವಿಡ್ ಹಿನ್ನೆಲೆ ಆಕ್ಸಿಜನ್ ಅಭಾವ ಹೆಚ್ಚಿರುವ ಕಾರಣ ಹೆಚ್ಚು ಬೆಲೆಗೆ ಆಕ್ಸಿಜನ್ ಸಿಲಿಂಡರ್​ಗಳನ್ನು ಕಾಳ ಸಂತೆಯಲ್ಲಿ ಮಾರುತ್ತಿದ್ದ ಆರೋಪಿ ರವಿಕುಮಾರ್ (36)ನನ್ನು ಬಂಧಿಸಲಾಗಿದೆ. ಈತ ಸೀಗಾ ಗ್ಯಾಸ್ ಎನ್ನುವ ಖಾಸಗಿ ಏಜೆನ್ಸಿಯ ಸೂಪರ್ ವೈಸರ್ ಆಗಿದ್ದ.

300 ರೂ. ಬೆಲೆಯ 47 ಲೀಟರ್​ನ ಒಂದು ಸಿಲಿಂಡರ್ ಅನ್ನು 3 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ. ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾಗಲೇ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದು, ಈತನ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details